ಉಡುಪಿ : ಕರ್ನಾಟಕದಲ್ಲಿ ಗೋಧ್ರಾ ಮಾದರಿಯಲ್ಲಿ ಮತ್ತೊಮ್ಮೆ ದುರಂತ ಆಗಬಹುದು ಎಂಬ ಎಂಎಲ್ ಸಿ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ತಿರುಗೇಟು ಕೊಟ್ಟಿದ್ದು, ಬಿ.ಕೆ.ಹರಿಪ್ರಸಾದ್ ಹಿಂದೂವೇ ಅಲ್ಲ, ಅವರೊಬ್ಬ ದೇಶದ್ರೋಹಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಕೆ. ಹರಿಪ್ರಸಾ ಅವರು ಕಾಂಗ್ರೆಸ್ ನಲ್ಲಿ ನಿರ್ಲಕ್ಷ್ಯಕ್ಕೆ ಒಳಪಟ್ಟಿದ್ದಾರೆ. ಹೀಗಾಗಿ ಅವರು ಈ ರೀತಿ ಮಾತನಾಡುತ್ತಿದ್ದಾರೆ. ಅವರು ಹಿಂದೂವೇ ಅಲ್ಲ, ಅವರೊಬ್ಬ ದೇಶದ್ರೋಹಿ ಎಂದು ಕಿಡಿಕಾರಿದ್ದಾರೆ.
ಹರಿಪ್ರಸಾದ್ ಗೆ ರಾಮ ಮಂದಿರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ಅಯೋಧ್ಯೆಗೆ ರಾಮಭಕ್ತರು ದೇಶಭಕ್ತರು ಬರಬೇಕು ಎಂದು ಕರೆ ಕೊಟ್ಟಿದ್ದೇವೆ. ದೇಶ ವಿರೋಧಿಗಳು ಬರುವುದು ಬೇಡ. ಬಿ. ಕೆ ಹರಿಪ್ರಸಾದ್ ಒಬ್ಬ ದೇಶದ್ರೋಹಿ ಅವರು ರಾಮಮಂದಿರಕ್ಕೆ ಬರುವುದು ಬೇಡ ಎಂದು ಹೇಳಿದ್ದಾರೆ.