alex Certify ಹೊಟ್ಟೆ ಮತ್ತು ಸೊಂಟದ ಬೊಜ್ಜನ್ನು ಸುಲಭವಾಗಿ ಕರಗಿಸುತ್ತೆ ಬ್ಲಾಕ್‌ ಬೀನ್ಸ್‌…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಟ್ಟೆ ಮತ್ತು ಸೊಂಟದ ಬೊಜ್ಜನ್ನು ಸುಲಭವಾಗಿ ಕರಗಿಸುತ್ತೆ ಬ್ಲಾಕ್‌ ಬೀನ್ಸ್‌…!

ಹೊಟ್ಟೆ ಮತ್ತು ಸೊಂಟದ ಕೊಬ್ಬು ಕರಗಿಸುವುದು ಸುಲಭದ ಕೆಲಸವಲ್ಲ. ಇದು ಅಧಿಕ ರಕ್ತದೊತ್ತಡ, ಹೃದಯದ ಕಾಯಿಲೆ ಮತ್ತು ಮಧುಮೇಹದಂತಹ ಸಮಸ್ಯೆಗಳನ್ನು ಕೂಡ ಉಂಟುಮಾಡಬಹುದು. ನಮ್ಮ ಅನಾರೋಗ್ಯಕರ ಜೀವನಶೈಲಿ ಕೂಡ ಹೊಟ್ಟೆ ಮತ್ತು ಸೊಂಟದ ಬೊಜ್ಜಿಗೆ ಕಾರಣವಾಗುತ್ತದೆ. ಕಪ್ಪು ಬೀನ್ಸ್‌ನಂತಹ ಆಹಾರ ಈ ಕೊಬ್ಬನ್ನು ಸುಲಭವಾಗಿ ಕರಗಿಸಬಲ್ಲದು. ಇದರ ಜೊತೆಗೆ ಜೀವನ ಶೈಲಿಯಲ್ಲಿ ಕೂಡ ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ.

ಹೊಟ್ಟೆಯ ಕೊಬ್ಬು ಕರಗಿಸಲು 4 ಮಾರ್ಗಗಳು

ಪ್ರತಿದಿನ 10 ಗ್ರಾಂ ಫೈಬರ್ ಸೇವನೆ – ಪ್ರತಿದಿನ 10 ಗ್ರಾಂ ಕರಗುವ ನಾರಿನಂಶವನ್ನು ಸೇವಿಸಿದ್ರೆ ಯಾವುದೇ ಕಸರತ್ತಿಲ್ಲದೇ ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಬಹುದು. ಇದಕ್ಕಾಗಿ ನಿಯಮಿತವಾಗಿ ಕಪ್ಪು ಬೀನ್ಸ್ ತಿನ್ನಲು ಪ್ರಾರಂಭಿಸಿ. ಇದು ಕರಗುವ ಫೈಬರ್‌ ಅನ್ನು ಹೊಂದಿದೆ.

ತೂಕವನ್ನು ಕಡಿಮೆ ಮಾಡಲು ಕೂಡ ಸಹಾಯಕವಾಗಿದೆ. ಆದರೆ ಯಾವುದೇ ಆಹಾರವು ಹೊಟ್ಟೆ ಮತ್ತು ಸೊಂಟದ ಬೊಜ್ಜನ್ನು ಕ್ಷಣಾರ್ಧದಲ್ಲಿ ಕರಗಿಸಲು ಸಾಧ್ಯವಿಲ್ಲ ಎಂಬುದನ್ನು ನೆನಪಿನಲ್ಲಿಡಿ. ಇದಕ್ಕಾಗಿ ಸ್ವಲ್ಪ ಸಮಯ ಬೇಕು.

ಇಪ್ಪತ್ತು ನಿಮಿಷಗಳ ವ್ಯಾಯಾಮ

ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಬಯಸಿದರೆ ಪ್ರತಿದಿನ ಕನಿಷ್ಠ 20 ನಿಮಿಷಗಳ ಕಾಲ ವ್ಯಾಯಾಮ ಮಾಡಬೇಕು. ವ್ಯಾಯಾಮ ಮಾಡಿದರೆ ಮೈ ಬೆವರುತ್ತದೆ. ದೇಹ ಆಕ್ಟಿವ್‌ ಆಗುತ್ತದೆ. ಜುಂಬಾ, ಫುಟ್ಬಾಲ್, ಈಜು ಅಥವಾ ಕಾರ್ಡಿಯೋ ಮಾಡಬಹುದು.

ಸಾಕಷ್ಟು ನಿದ್ರೆ ಮಾಡುವುದು ಉತ್ತಮ

ನಿದ್ರೆಯ ಕೊರತೆ ಚಯಾಪಚಯವನ್ನು ನಿಧಾನಗೊಳಿಸುತ್ತದೆ. ಇದು ದೇಹದಲ್ಲಿ ಕೊಬ್ಬಿನ ತ್ವರಿತ ಶೇಖರಣೆಗೆ ಕಾರಣವಾಗುತ್ತದೆ. ಆದ್ದರಿಂದ, ದಿನಕ್ಕೆ ಕನಿಷ್ಠ 7 ರಿಂದ 8 ಗಂಟೆಗಳ ಕಾಲ ನಿದ್ದೆ ಮಾಡಿ. ಬೊಜ್ಜು ಕರಗಿಸಲು ಚೆನ್ನಾಗಿ ನಿದ್ದೆ ಮಾಡುವುದು ಕೂಡ ಬಹಳ ಮುಖ್ಯ.

ಟೆನ್ಷನ್ ಕಡಿಮೆ ಮಾಡಿಕೊಳ್ಳಬೇಕು

ಪ್ರತಿಯೊಬ್ಬರ ಜೀವನದಲ್ಲೂ ಒತ್ತಡ ಇದ್ದೇ ಇರುತ್ತದೆ. ಆದರೆ ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಈ ಒತ್ತಡವನ್ನು ಮಿತಿಯಲ್ಲಿ ಇಟ್ಟುಕೊಳ್ಳಬೇಕು. ಏಕೆಂದರೆ ಇದು ಕೂಡ ಹೊಟ್ಟೆಯ ಕೊಬ್ಬನ್ನು ಹೆಚ್ಚಿಸಲು ಕಾರಣವಾಗಿರಬಹುದು. ಒತ್ತಡವನ್ನು ಕಡಿಮೆ ಮಾಡಲು ಧ್ಯಾನವನ್ನು ಮಾಡಬಹುದು, ಸ್ನೇಹಿತರು ಮತ್ತು ಕುಟುಂಬದೊಂದಿಗೆ ಸಮಯ ಕಳೆಯಬಹುದು ಅಥವಾ ತಜ್ಞರ ಸಹಾಯವನ್ನು ತೆಗೆದುಕೊಳ್ಳಬಹುದು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...