ಬೆಂಗಳೂರು: ಕೊರೋನಾ ಸೋಂಕಿತರ ಜೀವಕ್ಕೆ ಅಪಾಯ ತರುತ್ತಿರುವ ಬ್ಲಾಕ್ ಫಂಗಸ್ ಗೆ ಉಚಿತವಾಗಿ ಚಿಕಿತ್ಸೆ ನೀಡಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ತಜ್ಞರ ಸಭೆ ನಡೆಸಿದ ಆರೋಗ್ಯ ಸಚಿವ ಸುಧಾಕರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ಕಲಬುರ್ಗಿ, ಹುಬ್ಬಳ್ಳಿ, ಮಂಗಳೂರು, ಕೆಎಂಸಿ ಮಣಿಪಾಲದಲ್ಲಿ ಬ್ಲಾಕ್ ಕಾಂಗ್ರೆಸ್ ಗೆ ಚಿಕಿತ್ಸೆ ನೀಡಲಾಗುತ್ತದೆ.
ವೈದ್ಯರು ಬ್ಲಾಕ್ ಫಂಗಸ್ ಕಾಯಿಲೆಯನ್ನು ಮುಚ್ಚಿಡಬಾರದು. ಮನೆಯ ಆರೈಕೆಯಲ್ಲಿರುವವರಿಗೆ ವೈದ್ಯರ ಸಲಹೆ ಇಲ್ಲದೆ ಸ್ಟೆರಾಯ್ಡ್ ಬಳಸುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ವಿಕ್ಟೋರಿಯಾ ಆಸ್ಪತ್ರೆ ಇ.ಎನ್.ಟಿ. ಮುಖ್ಯಸ್ಥ ಡಾ.ಹೆಚ್.ಎಸ್. ಸತೀಶ್ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಈ ಸಮಿತಿ ಜೊತೆಗೆ ಸಚಿವರು ಸಭೆ ನಡೆಸಿದ್ದಾರೆ. ರಾಜ್ಯದಲ್ಲಿ ಸೋಮವಾರ 43 ಬ್ಲಾಕ್ ಫಂಗಸ್ ಪ್ರಕರಣಗಳು ವರದಿಯಾಗಿದ್ದು ಒಬ್ಬರು ಮೃತಪಟ್ಟಿದ್ದಾರೆ.