
ಮಂಗಳೂರು: ಕಾಂಗ್ರೆಸ್ ಮುಖಂಡನ ವಿರುದ್ಧ ಜಿಲೆಟಿನ್ ಸ್ಪೋಟಿಸಿದ ಆರೋಪ ಕೇಳಿ ಬಂದಿದೆ. ಕಟ್ಟಡ ನಿರ್ಮಾಣಕ್ಕೆ ಜಾಗ ಸಮತಟ್ಟು ಮಾಡಲು ಕಲ್ಲುಗಳನ್ನು ಸ್ಪೋಟಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಲಾಯಲ ಗ್ರಾಮದಲ್ಲಿ ಘಟನೆ ನಡೆದಿದೆ. ಕಾಂಗ್ರೆಸ್ ಮುಖಂಡ ಗಂಗಾಧರ ಗೌಡ ವಿರುದ್ಧ ಸ್ಥಳೀಯರು ಆರೋಪಿಸಿದ್ದಾರೆ. ಗಂಗಾಧರ ಗೌಡ ಒಡೆತನದ ಪ್ರಸನ್ನ ಎಜುಕೇಶನ್ ಟ್ರಸ್ಟ್ ನೂತನ ಕಟ್ಟಡ ನಿರ್ಮಾಣಕ್ಕೆ ಜಿಲೆಟಿನ್ ಕಡ್ಡಿ ಇಟ್ಟು ಕಲ್ಲುಗಳನ್ನು ಸ್ಪೋಟಿಸಲಾಗಿದೆ.
ಸ್ಪೋಟದಿಂದ ಮನೆಗಳಲ್ಲಿ ಬಿರುಕು ಮೂಡಿದ್ದು, ಕುಡಿಯುವ ನೀರಿನ ಬಾವಿಗೂ ಹಾನಿಯಾಗಿದೆ. ಈ ಬಗ್ಗೆ ಕೇಳಿದ್ದಕ್ಕೆ ತಲಾ 10 ಸಾವಿರ ರೂಪಾಯಿ ನೀಡುವುದಾಗಿ ಗಂಗಾಧರ ಗೌಡ ಹೇಳಿದ್ದಾರೆ. ಬೆಳ್ತಂಗಡಿ ತಹಶೀಲ್ದಾರ್ ಗೆ ಸ್ಥಳೀಯ ನಿವಾಸಿಗಳು ದೂರು ನೀಡಿದ್ದಾರೆ.