ಬಾಗಲಕೋಟೆ: ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಪೋಟ ಸಂಭವಿಸಿ ಒಬ್ಬರು ಸಾವನ್ನಪ್ಪಿದ್ದಾರೆ. ಸ್ಪೋಟದಲ್ಲಿ ನಾಲ್ವರು ಗಾಯಗೊಂಡಿದ್ದು, ಮುಧೋಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಬಾಗಲಕೋಟೆ ಜಿಲ್ಲೆ ಮುಧೋಳ ನಗರದ ಬಳಿ ಇರುವ ಡಿಸ್ಟಿಲರಿ ಘಟಕದಲ್ಲಿ ಘಟನೆ ಸಂಭವಿಸಿದೆ. ಜುಂಜರಕೊಪ್ಪಗಲ್ಲಿ ನಿವಾಸಿ ಗುರುನಾಥ ಹುಚ್ಚಣ್ಣನವರ(27) ಮೃತಪಟ್ಟವರು ಎಂದು ಹೇಳಲಾಗಿದೆ. ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.