ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಡೆದ ಅಗ್ನಿ ಅವಘಡದಲ್ಲಿ 8 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.
ಆರು ಮಂದಿ ಮಹಿಳೆಯರು ಹಾಗೂ ಇಬ್ಬರು ಪುರುಷ ಕಾರ್ಮಿಕರು ಗಾಯಗೊಂಡಿದ್ದಾರೆ. ಚೆನ್ನವ್ವ(42), ಪ್ರೇಮಾ(20), ಮಾಳೆಪ್ಪ(27), ನಾನ್ನಿಮಾ(35), ನಿರ್ಮಲಾ(29), ಗೌರಮ್ಮ(45), ವಿಜಯಲಕ್ಷ್ಮಿ(34), ಮಲ್ಲಿಕ್ ರೆಹಮಾನ್(18) ಗಾಯಗೊಂಡವರು ಎಂದು ಹೇಳಲಾಗಿದೆ.
ಎಲ್ಲಾ ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಬರ್ತಡೇ ಕೇಕ್ ಗೆ ಬಳಸುವ ಸ್ಪಾರ್ಕ್ ಕ್ಯಾಂಡಲ್ ಫ್ಯಾಕ್ಟರಿ ಇದಾಗಿದ್ದು, ನಿರಂತರ ಸ್ಪೋಟಗೊಂಡು ಭಾರೀ ಬೆಂಕಿ ಆವರಿಸಿದೆ. ಬೆಂಕಿಯ ಕೆನ್ನಾಲಿಗೆಯಲ್ಲಿ ಸಿಲುಕಿ 8 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.