alex Certify BIG BREAKING: ಹುಬ್ಬಳ್ಳಿಯಲ್ಲಿ ಭಾರೀ ಅಗ್ನಿ ಅವಘಡ: 4 -5 ಮಂದಿ ಸಾವಿನ ಶಂಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಹುಬ್ಬಳ್ಳಿಯಲ್ಲಿ ಭಾರೀ ಅಗ್ನಿ ಅವಘಡ: 4 -5 ಮಂದಿ ಸಾವಿನ ಶಂಕೆ

ಹುಬ್ಬಳ್ಳಿ: ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು 8 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮದ್ದಿನ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಒಂದು ಬೈಕ್ ಕೂಡ ಭಸ್ಮವಾಗಿದೆ. ಅಗ್ನಿ ಅವಘಡದಲ್ಲಿ 8ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಫ್ಯಾಕ್ಟರಿಯಲ್ಲಿ ಇನ್ನೂ ನಾಲ್ಕೈದು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ರಕ್ಷಣಾ ಕಾರ್ಯಾಚರಣೆ ವೇಳೆ ಮತ್ತೆ ಸ್ಪೋಟ ಸಂಭವಿಸಿದೆ. ಬರ್ತಡೇ ಕೇಕ್ ಗೆ ಬಳಸುವ ಸ್ಪಾರ್ಕ್ ಕ್ಯಾಂಡಲ್ ಫ್ಯಾಕ್ಟರಿ ಇದಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...