alex Certify BREAKING NEWS: ಜಮ್ಮು ವಿಮಾನ ನಿಲ್ದಾಣದಲ್ಲಿ ಸ್ಫೋಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಜಮ್ಮು ವಿಮಾನ ನಿಲ್ದಾಣದಲ್ಲಿ ಸ್ಫೋಟ

ಜಮ್ಮು: ಭಾನುವಾರ ಬೆಳಗಿನ ಜಾವ 1.40 ಸುಮಾರಿಗೆ ಜಮ್ಮು ವಿಮಾನ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ವಿಧಿವಿಜ್ಞಾನ ತಂಡ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ದೌಡಾಯಿಸಿದ್ದಾರೆ.

ಭಾರತೀಯ ವಾಯುಪಡೆಯ ಮಾಧ್ಯಮ ಸಮನ್ವಯ ಕೇಂದ್ರ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಯಾವುದೇ ದೊಡ್ಡ ಪ್ರಮಾಣದ ಹಾನಿ ವರದಿಯಾಗಿಲ್ಲ.ಈ ವಿಮಾನ ನಿಲ್ದಾಣವು ನಾಗರಿಕ ವಿಮಾನ ನಿಲ್ದಾಣವಲ್ಲ. ವಿಮಾನ ನಿಲ್ದಾಣದ ತಾಂತ್ರಿಕ ಪ್ರದೇಶದೊಳಗೆ ಸ್ಪೋಟ ಸಂಭವಿಸಿದೆ. ವಾಯುಪಡೆಗೆ ಸೇರಿದ ಜಮ್ಮುವಿನ ವಿಮಾನ ನಿಲ್ದಾಣದೊಳಗೆ ಸ್ಫೋಟ ಸಂಭವಿಸಿದ್ದು, ಯಾವುದೇ ಸಿಬ್ಬಂದಿಗೆ ಗಾಯ ಅಥವಾ ಹಾನಿಯಾದ ವರದಿಯಾಗಿಲ್ಲ. ತನಿಖೆ ಮುಂದುವರಿಸಲಾಗಿದೆ ಎಂದು ರಕ್ಷಣಾ ವಕ್ತಾರರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...