alex Certify ಅಲ್ಪಸಂಖ್ಯಾತರ ಓಲೈಕೆ ಪರಿಣಾಮವೇ ಈ ಸ್ಪೋಟ: ಸರ್ಕಾರದಿಂದ FSL ವರದಿ ಮುಚ್ಚಿಡುವ ಯತ್ನ: ವಿಜಯೇಂದ್ರ, ಅಶೋಕ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಲ್ಪಸಂಖ್ಯಾತರ ಓಲೈಕೆ ಪರಿಣಾಮವೇ ಈ ಸ್ಪೋಟ: ಸರ್ಕಾರದಿಂದ FSL ವರದಿ ಮುಚ್ಚಿಡುವ ಯತ್ನ: ವಿಜಯೇಂದ್ರ, ಅಶೋಕ್ ವಾಗ್ದಾಳಿ

ಬೆಂಗಳೂರು: ಅಲ್ಪಸಂಖ್ಯಾತರ ಓಲೈಕೆಯ ಪರಿಣಾಮವೇ ಈ ಬ್ಲಾಸ್ಟ್ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟಕ್ಕೆ ಸಂಬಂಧಿಸಿದಂತೆ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಉಭಯ ನಾಯಕರು, ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಅಲ್ಪ ಸಂಖ್ಯಾತರ ಓಲೈಕೆಯ ಪರಿಣಾಮದಿಂದ ಈ ಸ್ಫೋಟ ನಡೆದಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಬೆನ್ನಲ್ಲೇ ಅದರ ಮುಂದುವರೆದ ಭಾಗವಾಗಿ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಸಂಭವಿಸಿದ್ದು, ಪಾಕಿಸ್ತಾನ ಜಿಂದಾಬಾದ್ ಘೋಷಣೆ ವರದಿ ಮುಚ್ಚಿಡುವ ಯತ್ನ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.

ಕಳೆದ ಎರಡು ದಿನದಲ್ಲಿ ಕಲಬುರ್ಗಿಯಲ್ಲಿ ಇಬ್ಬರ ಹತ್ಯೆ ನಡೆದಿದೆ. ಕಲಬುರಗಿ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ ಮಾಡಲಾಗಿದೆ. ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಟೀಕಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...