ಮುಂಬೈನಲ್ಲಿ ಕೊರೊನಾ ಸೋಂಕು ತಡೆಗೆ ಕಟ್ರಿನ ನಿರ್ಬಂಧ ಜಾರಿಗೊಳಿಸಲಾಗಿದೆ. ಲಾಕ್ಡೌನ್ ಸಂದರ್ಭದಲ್ಲಿ ಮದ್ಯವನ್ನು ಮನೆ ಬಾಗಿಲಿಗೆ ಪೂರೈಕೆ ಮಾಡಲು ಅವಕಾಶ ನೀಡಲಾಗಿದೆ.
ಅನಾರೋಗ್ಯ ಪೀಡಿತರು, ಹಿರಿಯ ನಾಗರಿಕರಿಗೆ ಮನೆಯಲ್ಲಿ ಸೇವೆ ಒದಗಿಸುವ ಚಾಲಕರು, ಅಡುಗೆಯವರು, ವೈದ್ಯಕೀಯ ಸೇವೆ ನೀಡುವವರಿಗೆ ವಾರದ ಎಲ್ಲಾ ದಿನಗಳಲ್ಲಿ ಬೆಳಗ್ಗೆ 7 ರಿಂದ ರಾತ್ರಿ 10 ಗಂಟೆಯವರೆಗೆ ಹೋಗಿ ಬರಲು ಅವಕಾಶ ಅವಕಾಶ ನೀಡಲಾಗಿದೆ.
ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ ವತಿಯಿಂದ ಬೆಳಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ ಮನೆಬಾಗಿಲಿಗೆ ಮದ್ಯ ಪೂರೈಕೆಗೆ ಅವಕಾಶ ನೀಡಲಾಗಿದೆ. ಪರವಾನಿಗೆ ಹೊಂದಿದ ಅಂಗಡಿಗಳಿಂದ ವಿದೇಶಿ ಮದ್ಯ ಹೊರತುಪಡಿಸಿ ಸ್ಥಳೀಯ ಆಲ್ಕೋಹಾಲ್ ಭಾರತೀಯ ನಿರ್ಮಿತ ವಿದೇಶಿ ಮದ್ಯವನ್ನು ಮನೆಬಾಗಿಲಿಗೆ ಪೂರೈಕೆ ಮಾಡಬಹುದು.
ಮದ್ಯವನ್ನು ಮನೆ ಬಾಗಿಲಿಗೆ ಡೆಲಿವರಿ ಮಾಡುವ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಸೇರಿದಂತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ವಾರಾಂತ್ಯ ಲಾಕ್ಡೌನ್ ಶುಕ್ರವಾರ ರಾತ್ರಿ 8 ಗಂಟೆಗೆ ಆರಂಭವಾಗಿದ್ದು ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಮುಂದುವರೆಯಲಿದೆ. ಏಪ್ರಿಲ್ 30 ರ ವರೆಗೂ ಕಠಿಣ ನಿರ್ಬಂಧಗಳು ಜಾರಿಯಲ್ಲಿರುತ್ತವೆ ಎನ್ನಲಾಗಿದೆ.