ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳ ಜೊತೆ ಕೋವಿಡ್ ಕ್ಲಸ್ಟರ್ ಗಳು ಹೆಚ್ಚಾಗುತ್ತಿವೆ. ಅದ್ರಲ್ಲೂ ಕಚೇರಿಗಳಲ್ಲಿ ಕೆಲಸ ಮಾಡುವವರಿಗೆ ಸೋಂಕು ಹೆಚ್ಚಾಗಿ ತಗುಲುತ್ತಿದೆ.
ಈಗಾಗ್ಲೇ ಪೊಲೀಸ್ ಠಾಣೆ, ಸಿಸಿಬಿ ಕಚೇರಿ, ಎಸಿಬಿ ಕಚೇರಿಯಲ್ಲಿನ ಸಿಬ್ಬಂದಿಗಳು ಸೋಂಕಿಗೆ ತುತ್ತಾಗಿದ್ದಾರೆ. ಈಗ ಈ ಸಾಲಿಗೆ ಬಿಎಂಆರ್ಸಿಎಲ್ ಅಂದರೆ ಮೆಟ್ರೋ ಕಚೇರಿಯ ಸಿಬ್ಬಂದಿಗಳು ಸೇರಿದ್ದು ಒಟ್ಟು ಏಳು ಮೆಟ್ರೋ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ತಗುಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಶಾಂತಿನಗರದ ನಮ್ಮ ಮೆಟ್ರೋ ಕೇಂದ್ರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಏಳು ಮೆಟ್ರೋ ಸಿಬ್ಬಂದಿಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಕಚೇರಿಯ ಅಟೆಂಡರ್ ಸೇರಿದಂತೆ 7 ಮಂದಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಅಧಿಕಾರಿಗಳು ಹಾಗೂ ಲೋಕೊಪೈಲಟ್ ಗಳು ಸುರಕ್ಷಿತರಾಗಿದ್ದಾರೆ ಎಂದು ಬಿಎಂಆರ್ಸಿಎಲ್ ಎಂಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ.
ಕೊರೊನಾ ಪಾಸಿಟಿವ್ ಬಂದಿರುವ ಸಿಬ್ಬಂದಿಗಳು ಸದ್ಯ ಹೋಂ ಐಸೋಲೇಷನ್ ನಲ್ಲಿದ್ದು, ಅವರಲ್ಲಿ ಲಘು ಲಕ್ಷಣಗಳಿವೆ ಎಂದು ತಿಳಿದು ಬಂದಿದೆ. ಇನ್ನು ನಮ್ಮ ಮೆಟ್ರೋ ಕೇಂದ್ರ ಕಚೇರಿಯಲ್ಲಿ 900ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಸಿಬ್ಬಂದಿಗಳಿಗೆ ಕಚೇರಿಯಲ್ಲಿಯೇ ಬಿಬಿಎಂಪಿ ಆರ್ಟಿಪಿಸಿಆರ್ ಟೆಸ್ಟ್ ನಡೆಸಿದೆ.