alex Certify ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಮೆಜೆಸ್ಟಿಕ್ ಹಾಗೂ ಗರುಡಾಚಾರ್ ಪಾಳ್ಯ ನಿಲ್ದಾಣದವರೆಗೆ ಹೆಚ್ಚುವರಿ ಮೆಟ್ರೋ ಸೇವೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಮೆಜೆಸ್ಟಿಕ್ ಹಾಗೂ ಗರುಡಾಚಾರ್ ಪಾಳ್ಯ ನಿಲ್ದಾಣದವರೆಗೆ ಹೆಚ್ಚುವರಿ ಮೆಟ್ರೋ ಸೇವೆ ಆರಂಭ

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ ಸಿಎಲ್ ಸಿಹಿ ಸುದ್ದಿ ನೀಡಿದೆ. ಮೆಜೆಸ್ಟಿಕ್ ನಿಂದ ವೈಟ್ ಫೀಲ್ಡ್ ಕಡೆ ಪ್ರಯಾಣಿಸುವವವರಿಗೆ ಬೆಳಿಗ್ಗೆ ಪೀಕ್ ಅವರ್ ಗಳಲ್ಲಿ ಪ್ರತಿ ಮೂರು ನಿಮಿಷಕ್ಕೊಮ್ಮೆ ಮೆಟ್ರೋ ಸೇವೆ ಒದಗಿಸಲಾಗುತ್ತಿದೆ.

ಸೋಮವಾರ ಬೆಳಿಗ್ಗೆ 8:45ರಿಂದ 10:20ರವರೆಗೆ ಮೆಜೆಸ್ಟಿಕ್ ಹಾಗೂ ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ರೈಲು ಸಂಚರಿಸಲಿದೆ.

ಬೆಳಿಗ್ಗೆ ಸಮಯದಲ್ಲಿ ಈ ಮಾರ್ಗದಲ್ಲಿ ಜನದಟ್ಟಣೆಯಿಂದ ಪ್ರಯಾಣಿಕರಿಗೆ ಆಗುತ್ತಿದ್ದ ತೊಂದರೆಗಳನ್ನು ತಪ್ಪಿಸುವ ಸಲುವಾಗಿ ಬಿಎಂಆರ್ ಸಿಎಲ್ ಈ ಕ್ರಮ ಕೈಗೊಂಡಿದ್ದು, ಇನ್ಮುಂದೆ ಪ್ರತಿ ಮೂರು ನಿಮಿಷಕ್ಕೊಮ್ಮೆ ಮೆಟ್ರೋ ಸಂಚರಿಸಲಿದೆ. ಈ ಭಾಗದ ಸಾರ್ವಜನಿಕರು ಕೂಡ ಹಲವು ಬಾರಿ ಹೆಚ್ಚುವರಿ ಮೆಟ್ರೋ ಸೇವೆ ಕಲ್ಪಿಸುವಂತೆ ಒತ್ತಾಯಿಸಿದ್ದರು. ಈ ನಿಟ್ಟಿನಲ್ಲಿ ಸೋಮವಾರದಿಂದ ಬೆಳಿಗ್ಗೆ ಜನದಟ್ಟಣೆ ಸಮಯದಲ್ಲಿ ಹೆಚ್ಚುವರಿ ಮೆಟ್ರೋ ಸೇವೆ ಒದಗಿಸಲಾಗುತ್ತಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...