ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಯಲಹಂಕ ನಾಲ್ಕನೇ ಹಂತದ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬಿಎಂಟಿಸಿ ಬಸ್ ಕಂಡಕ್ಟರ್ ಸೋಮಪ್ಪ ಮೃತ ದುರ್ದೈವಿ. ಬಸ್ ಟಿಕೆಟ್ ಹಣದ ಲೆಕ್ಕ ನೀಡಿ ಕಂಡಕ್ಟರ್ ವಾಪಸ್ ಆಗುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಕಂಡಕ್ಟರ್ ಸಾವನಪ್ಪಿದ್ದಾರೆ.
ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.