alex Certify BMTC ಬಸ್ ನಲ್ಲಿ ಬೆಂಕಿ ಅವಘಡ; ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಬಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BMTC ಬಸ್ ನಲ್ಲಿ ಬೆಂಕಿ ಅವಘಡ; ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಬಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.

ಚಾಮರಾಜಪೇಟೆಯ ಮಕ್ಕಳ ಕೂಟದ ಬಳಿ ಈ ಘಟನೆ ನಡೆದಿದ್ದು, ನಡು ರಸ್ತೆಯಲ್ಲಿಯೇ ಬಸ್ ಬೆಂಕಿಗಾಹುತಿಯಾಗಿದೆ. KA-57 F-1592 ಬಿಎಂಟಿಸಿ ಬಸ್ ಇದಾಗಿದ್ದು, ಇಂಜಿನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.

ಬಸ್ ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅದೃಷ್ಣವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ ನಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಚಾಲಕ ಬಸ್ ನಿಲ್ಲಿಸಿದ್ದು, ಪ್ರಯಾಣಿಕರು ಬಸ್ ನಿಂದ ಇಳಿದುಕೊಂಡಿದ್ದಾರೆ. ನೋಡ ನೋಡುತ್ತಿದ್ದಂತೆ ಬೆಂಕಿ ಬಸ್ ತುಂಬಾ ವ್ಯಾಪಿಸಿಕೊಂಡಿದೆ. ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸರು ಭೇಟಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...