ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಟ್ವಿಸ್ಟ್ ಕೊಟ್ಟಿದ್ದಾರೆ. ಬೈಕ್ ಸವಾರನ ಸಾವಿಗೆ ರೋಡ್ ಸ್ಟ್ರಿಪ್ಸ್ ಕಾರಣ ಎಂದು ಹೇಳಿದ್ದಾರೆ.
ಸುಮ್ಮನಹಳ್ಳಿ-ಲಗ್ಗೆರೆ ರಿಂಗ್ ರಸ್ತೆಯಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಪ್ರಮೋದ್ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ಕಾಮಾಕ್ಷಿಪಾಳ್ಯ ಪೊಲೀಸರು, ಬೈಕ್ ಸವಾರನ ಸಾವಿಗೆ ರೋಡ್ ಸ್ಟ್ರಿಪ್ಸ್ ಕಾರಣ. ರೋಡ್ ಸ್ಟ್ರಿಪ್ಸ್ ಬಳಿ ಬೈಕ್ ಸವಾರ ಬೈಕನ್ನು ಸ್ಲೋ ಮಾಡಿದ್ದಾರೆ. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಕೆಳಗೆ ಬಿದ್ದಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.