ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ 2,500 ನಿರ್ವಾಹಕರ ಹುದ್ದೆ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ.
ಮಿಕ್ಕುಳಿದ ವೃಂದದ 2296 ಹುದ್ದೆಗಳು, ಸ್ಥಳೀಯ ವೃಂದದ 199, ಹಿಂಬಾಕಿ 35 ಹುದ್ದೆ ಸೇರಿ 2500 ಹುದ್ದೆಗಳಿಗೆ ಮಾರ್ಚ್ 1 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಶೈಕ್ಷಣಿಕ ಅರ್ಹತೆಯಾಗಿ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ಪೂರ್ಣಗೊಳಿಸಿರಬೇಕು. ಮಾನ್ಯತೆ ಹೊಂದಿರುವ ಮೋಟಾರ್ ವಾಹನ ನಿರ್ವಾಹಕ ಪರವಾನಿಗೆ ಬ್ಯಾಡ್ಜ್ ಹೊಂದಿರಬೇಕು ಎಂದು ಹೇಳಲಾಗಿದೆ.
ವಿವರಗಳಿಗಾಗಿ https://kea.kar.nic.in ವೆಬ್ ಸೈಟ್ ಗಮನಿಸಬಹುದಾಗಿದೆ.