
ಬೆಂಗಳೂರು: ಬಸ್ ನಲ್ಲಿ ಪ್ರಯಾಣಿಕರು ಬಿಟ್ಟುಹೋಗಿದ್ದ ಸುಮಾರು 6 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗ್ ಅನ್ನು ವಾರಸುದಾರರಿಗೆ ಮರಳಿಸುವ ಮೂಲಕ ಬಿಎಂಟಿಸಿ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಬಳ್ಳಾರಿ ರಸ್ತೆಯ ಎಸ್ಟಿಮ್ ಮಾಲ್ ಬಸ್ ನಿಲ್ದಾಣದಲ್ಲಿ ಸಂಚಾರಿ ನಿಯಂತ್ರಣ ಸಿಬ್ಬಂದಿಗಳಾದ ಪ್ರಕಾಶ್ ಮತ್ತು ಶಮೀನಾಬಿ ಅವರು ಬ್ಯಾಗ್ ಗಮನಿಸಿದ್ದಾರೆ. ಬ್ಯಾಗ್ ನಲ್ಲಿ ಬೆಲೆಬಾಳುವ ವಸ್ತುಗಳು ಇರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬ್ಯಾಗ್ ನಲ್ಲಿದ್ದ ಮೊಬೈಲ್ ಗೆ ಬಂದ ಕರೆಯನ್ನು ಸ್ವೀಕರಿಸಿ ಪೊಲೀಸ್ ಠಾಣೆಗೆ ಬರುವಂತೆ ತಿಳಿಸಲಾಗಿದೆ. ವಿದ್ಯಾರಣ್ಯಪುರದ ದಂಪತಿ ಪೊಲೀಸ್ ಠಾಣೆಗೆ ಆಗಮಿಸಿದ ಬಳಿಕ ಪೊಲೀಸರು ಮುಚ್ಚಳಿಕೆ ಬರೆಸಿಕೊಂಡು ಮಾಂಗಲ್ಯಸರ, ಉಂಗುರ, ಮೊದಲಾದ ಚಿನ್ನಾಭರಣ, ನಗದು, ಮೊಬೈಲ್ ಇದ್ದ ಬ್ಯಾಗ್ ಹಿಂದಿರುಗಿಸಿದ್ದಾರೆ.