
ಬೆಂಗಳೂರು: ಬಿಎಂಟಿಸಿ ಬಸ್ ಹಾಗೂ ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೆ.ಆರ್.ಮಾರುಕಟ್ಟೆ ಬಳಿ ನಡೆದಿದೆ.
ಕೆ.ಆರ್.ಮಾರುಕಟ್ಟೆ ಫೈಓವರ್ ಮೇಲೆ ಈ ಅಪಘಾತ ಸಂಭವಿಸಿದೆ. ಬಸ್ ಗೆ ಬೈಕ್ ವೊಂದು ಡಿಕ್ಕಿಹೊಡೆದು ಬಸ್ ಕೆಳಗೆ ಸಿಲುಕಿದೆ. ಇದೇ ವೇಳೆ ಬಂದ ಮತ್ತೊಂದು ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.
ಬೈಕ್ ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.