
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಹಲವರು ಬಲಿಯಾಗುತ್ತಿದ್ದಾರೆ. ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಹರಿಶ್ಚಂದ್ರಘಾಟ್ ಬಳಿ ಈ ಅಪಘಾತ ಸಂಭವಿಸಿದ್ದು, ಮಲ್ಲೇಶ್ವರಂ ನಿವಾಸಿ ಕುಸುಮಿತಾ (21) ಮೃತ ಪಟ್ಟಿದ್ದಾಳೆ. ಬೆಳಿಗ್ಗೆ ಕಾಲೇಜಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಬೈಕ್ ನ್ನು ಬಸ್ ಕೆಲ ದೂರ ಎಳೆದುಕೊಂಡು ಹೋಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಕೊನೆಯುಸಿರೆಳೆದಿದ್ದಾಳೆ.