ಬೆಂಗಳೂರು : ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬನ ಮೇಲೆ ಕಂಡಕ್ಟರ್ ಹಲ್ಲೆ ನಡೆಸಿ, ಕನ್ನಡದಲ್ಲಿ ಮಾತನಾಡುವಂತೆ ಒತ್ತಾಯಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆ ವ್ಯಕ್ತಿಯು ಘಟನೆಯ ವೀಡಿಯೊವನ್ನು ರೆಕಾರ್ಡ್ ಮಾಡಿ ನ್ಯಾಯಕ್ಕೆ ಆಗ್ರಹಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾನೆ.ಮಂಗಳವಾರ ರಾತ್ರಿ ಮಾರತ್ತಹಳ್ಳಿಯ ರೇನ್ಬೋ ಆಸ್ಪತ್ರೆಯ ಬಳಿ ಈ ಹಲ್ಲೆ ನಡೆದಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ವೀಡಿಯೊದಲ್ಲಿ, ಬಸ್ ಕಂಡಕ್ಟರ್ ವ್ಯಕ್ತಿಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸುವುದನ್ನು ಕಾಣಬಹುದು. ಕಂಡಕ್ಟರ್ ಆ ವ್ಯಕ್ತಿಗೆ ಹಿಂದಿಯ ಬದಲು ಕನ್ನಡದಲ್ಲಿ ಮಾತನಾಡಲು ಹೇಳಿದರು. ಕಂಡಕ್ಟರ್ ಹಾಗೂ ಪ್ರಯಾಣಿಕನ ನಡುವಿನ ಸಂಭಾಷಣೆಯ ವಿಡಿಯೋ ವೈರಲ್ ಆಗಿದೆ.
‘ಬೆಂಗಳೂರಿನ ಮಾರತ್ತಹಳ್ಳಿಯ ರೇನ್ಬೋ ಆಸ್ಪತ್ರೆ ಬಳಿ ನಿನ್ನೆ ರಾತ್ರಿ ಬಿಎಂಟಿಸಿ ಬಸ್ನಲ್ಲಿ ನನ್ನ ಮೇಲೆ ಕಂಡಕ್ಟರ್ ಹಲ್ಲೆ ನಡೆಸಿದ್ದಾನೆ. ನನಗೆ ಚಿಲ್ಲರೆ ನೀಡಲು ಅಥವಾ ಯುಪಿಐ ಮೂಲಕ ಪಾವತಿ ತೆಗೆದುಕೊಳ್ಳಲು ನಿರಾಕರಿಸಿದ ನಂತರ, ಬಿಎಂಟಿಸಿ ಕಂಡಕ್ಟರ್ ನನ್ನ ಮೇಲೆ ಹಲ್ಲೆ ನಡೆಸಿದರು ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಈ ಘಟನೆಯು ಕರ್ನಾಟಕದಲ್ಲಿ ಸ್ಥಳೀಯರಲ್ಲದವರು ಎದುರಿಸುತ್ತಿರುವ ಭಾಷೆಯ ಸಮಸ್ಯೆಯನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ವೈರಲ್ ವಿಡಿಯೋಗೆ ತರಹೇವಾರಿ ಕಮೆಂಟ್ ಗಳು ಬರುತ್ತಿದೆ.