ಬೆಂಗಳೂರು: ನಾಳೆಯಿಂದ ಮೈಸೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಸಂಚಾರ ಶುರುವಾಗಲಿದೆ.
ಬಿಎಂಟಿಸಿ ಮಾಸಿಕ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಏಪ್ರಿಲ್ ತಿಂಗಳ ಬಸ್ ಪಾಸ್ ಅವಧಿಯನ್ನು ಜುಲೈ 8 ರವರೆಗೆ ವಿಸ್ತರಿಸಿ ಬಿಎಂಟಿಸಿ ಆದೇಶ ಹೊರಡಿಸಿದೆ.
ನಾಳೆಯಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಲಿದ್ದು, ಮೈಸೂರು ಜಿಲ್ಲೆ ಹೊರತಾಗಿ ಉಳಿದ ಜಿಲ್ಲೆಗಳಲ್ಲಿ ಸಂಚರಿಸಲಿವೆ. ಚಾಲಕರು, ನಿರ್ವಾಹಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದ್ದು, ಪ್ರಯಾಣಿಕರು ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕಿದೆ.