alex Certify BMTC ಬಸ್ ಗೆ ಕಾರು ಡಿಕ್ಕಿ; ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BMTC ಬಸ್ ಗೆ ಕಾರು ಡಿಕ್ಕಿ; ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು

ಬೆಂಗಳೂರು: ಬಿಎಂಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ ಘಟನೆ ಬೆಂಗಳೂರಿನ ನಾಯಂಡಹಳ್ಳಿಯ ರಿಂಗ್ ರಸ್ತೆಯಲ್ಲಿ ನಡೆದಿದೆ.

ಬಿಎಂಟಿಸಿ ಬಸ್ ಗೆ ವೇಗವಾಗಿ ಬಂದ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಕಾರಿನ ತುಂಬೆಲ್ಲ ಬೆಂಕಿ ಆವರಿಸಿ ಹೊತ್ತಿ ಉರಿದಿದೆ.

ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ತಕ್ಷಣ ಕೆಳಗಿಳಿದಿದ್ದಾರೆ. ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರು ಬಹುತೇಕ ಸುಟ್ಟು ಕರಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...