ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದೆ. ಹಂತಹಂತವಾಗಿ ಅನ್ಲಾಕ್ ಪ್ರಕ್ರಿಯೆ ಆರಂಭವಾಗಲಿದೆ.
ಸೋಂಕು ಹೆಚ್ಚಾಗಿರುವ ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದ ಜಿಲ್ಲೆಗಳಲ್ಲಿ ಅನ್ಲಾಕ್ ಹಂತ ಹಂತವಾಗಿ ಆರಂಭವಾಗಲಿದೆ. ಬೆಂಗಳೂರಿನಲ್ಲಿ ಅನ್ಲಾಕ್ ನಂತರ 3000 ಬಿಎಂಟಿಸಿ ಬಸ್ ಗಳು ರಸ್ತೆಗಿಳಿಯಲು ಸಜ್ಜಾಗಿವೆ.
ಬಿಎಂಟಿಸಿ ಸಿಬ್ಬಂದಿಗೆ ಕೊರೋನಾ ನೆಗೆಟಿವ್ ವರದಿಯೊಂದಿಗೆ ಲಸಿಕೆ ಹಾಕಿಸಿಕೊಂಡು ಕರ್ತವ್ಯಕ್ಕೆ ಹಾಜರಾಗಲು ತಿಳಿಸಲಾಗಿದೆ. ಬಿಎಂಟಿಸಿ ಬಸ್ ಸಂಚಾರ ಆರಂಭಿಸಲು ಅಗತ್ಯವಾದ ಸಿದ್ಧತೆ ಕೈಗೊಳ್ಳಲಾಗಿದೆ. ಪ್ರಸ್ತುತ ಅಗತ್ಯ ಮತ್ತು ತುರ್ತು ಸೇವೆಗಳಿಗೆ 130 ಬಿಎಂಟಿಸಿ ಬಸ್ ಗಳು ಕಾರ್ಯನಿರ್ವಹಿಸುತ್ತಿದ್ದು, ಅನ್ಲಾಕ್ ನಂತರ 3000 ಬಸ್ ಗಳನ್ನು ರಸ್ತೆಗಿಳಿಸಲು ಚಿಂತನೆ ನಡೆಸಲಾಗಿದೆ. ಈ ಕುರಿತಂತೆ ಎಲ್ಲಾ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಕಡ್ಡಾಯವಾಗಿ ಕೊರೋನಾ ಲಸಿಕೆ, ನೆಗೆಟಿವ್ ವರದಿಯೊಂದಿಗೆ ಕರ್ತವ್ಯಕ್ಕೆ ಹಾಜರಾಗಲು ತಿಳಿಸಲಾಗಿದೆ.