ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ನಾಗರಬಾವಿಯ ಖಾಸಗಿ ಹೋಟೆಲ್ ಬಳಿ ನಡೆದಿದೆ.
ರಸ್ತೆ ದಾಟುತ್ತಿದ್ದ ಸುಮಾರು 60 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಕಾಮಾಕ್ಷಿಪಾಳ್ಯ ಸಂಚಾರ ಠಾಣೆ, ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಗರಬಾವಿ ಸರ್ಕಲ್ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹವನ್ನು ನಾಗರಬಾವಿಯ ಜಿಎಂ ಆಸ್ಪತ್ರೆಗೆ ರವಾನಿಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.