alex Certify BMTC ಮೃತ ನೌಕರರ ಕುಟುಂಬಕ್ಕೆ 50 ಲಕ್ಷ ಪರಿಹಾರ, ಸರ್ಕಾರಿ ಹುದ್ದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BMTC ಮೃತ ನೌಕರರ ಕುಟುಂಬಕ್ಕೆ 50 ಲಕ್ಷ ಪರಿಹಾರ, ಸರ್ಕಾರಿ ಹುದ್ದೆ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಳಿಕ ಇದೀಗ ಬಿಎಂಟಿಸಿ ನೌಕರರಿಗೂ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಿಎಂಟಿಸಿಯ ನೌಕರರು ಮೃತಪಟ್ಟರೆ ಪರಿಹಾರ ಹಾಗೂ ಸರ್ಕಾರಿ ಉದ್ಯೋಗದ ಭರವಸೆ ನೀಡಿದೆ.

2023ರ ಅಕ್ಟೋಬರ್ 30ರಂದು ಅಪಘಾತದಲ್ಲಿ ಮೃತಪಟ್ಟಿದ್ದ ಬಿಎಂಟಿಸಿ ಡ್ರೈವರ್ ಮಲ್ಲಿಕಾರ್ಜುನ ಅವರ ಪತ್ನಿ ರುದ್ರಮ್ಮಗೆ ಇದೇ ಮೊದಲ ಬಾರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ 50 ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಿದ್ದು, ಸರ್ಕಾರಿ ಉದ್ಯೋಗದ ಭರವಸೆ ನಿಡಿದ್ದಾರೆ.

ಮೃತ ಮಲ್ಲಿಕಾರ್ಜುನ ಅವರ ಕುಟುಂಬಕ್ಕೆ ಅನುಕಂಪದ ಆಧಾರದ ಮೇಲೆ ಕೆಲಸ ನೀಡುವುದಾಗಿ ಭರವಸೆ ನೀಡಿದ್ದಾರೆ. ಬಿಎಂಟಿಸಿ 2023 ಆಗಸ್ಟ್ 21ರಂದು ಯೂನಿಯನ್ ಬ್ಯಾಂಕ್ ನೊಂದಿಗೆ ಮೂರು ವರ್ಷ ಅವಧಿಗೆ ಒಪ್ಪಂದ ಮಾಡಿಕೊಂಡಿದ್ದು, ಬ್ಯಾಂಕ್ ನಲ್ಲಿ ಖಾತೆ ಹೊಂದಿದ ಬಿಎಂಟಿಸಿ ಸಿಬ್ಬಂದಿಗಳಿಗೆ ಕರ್ತವ್ಯ ನಿರತ ಅಥವಾ ವೈಯಕ್ತಿಕ ಅಪಘಾತದಲ್ಲಿ ಸಾವನ್ನಪ್ಪಿದರೆ ಬ್ಯಾಂಕ್ ವತಿಯಿಂದ ಕೆಲ ಸೌಲಭ್ಯಗಳು ದೊರೆಯಲಿವೆ. ಈ ಮೂಲಕ ಬಿಎಂಟಿಸಿಯ ಮೃತ ನೌಕರರ ಕುಟುಂಬಕ್ಕೆ ಇನ್ಮುಂದೆ 50 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗ ದೊರೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...