
ಕಟ್ಟಡ ಕಾರ್ಮಿಕರಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಲು ಮುಂದಾಗಿದ್ದು, ಬಸ್ ಪಾಸ್ ಬದಲಿಗೆ ಸ್ಮಾರ್ಟ್ ಕಾರ್ಡ್ ರೂಪದಲ್ಲಿ ಇದನ್ನು ನೀಡಲು ಚಿಂತನೆ ನಡೆಸಲಾಗಿದೆ. ಕಟ್ಟಡ ಮತ್ತು ಕಾರ್ಮಿಕರ ಕಲ್ಯಾಣ ಮಂಡಳಿ ಇದನ್ನು ಅನುಷ್ಠಾನಗೊಳಿಸುತ್ತಿದೆ.
ಬೆಂಗಳೂರು ಒನ್ ಕೇಂದ್ರ, ಬಿಎಂಟಿಸಿ ಬಸ್ ನಿಲ್ದಾಣ ಹಾಗೂ ಘಟಕಗಳಲ್ಲಿ ಈ ಸ್ಮಾರ್ಟ್ ಕಾರ್ಡ್ ಸಿಗಲಿದ್ದು, ನೋಂದಾಯಿತ ಕಟ್ಟಡ ಕಾರ್ಮಿಕರು ಬಸ್ ಪಾಸ್ ನಿಂದ ಸ್ಮಾರ್ಟ್ ಕಾರ್ಡ್ ಗೆ ಅಪ್ ಗ್ರೇಡ್ ಆಗಬಹುದಾಗಿದೆ.
ಈ ಸ್ಮಾರ್ಟ್ ಕಾರ್ಡ್ ಪಡೆಯಲು ಕಟ್ಟಡ ಮತ್ತು ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತರಾಗಿರಬೇಕು. ಅಲ್ಲದೆ ಗುರುತಿನ ಚೀಟಿ ಜೊತೆಗೆ ಆಧಾರ್ ಕಾರ್ಡ್ ಪ್ರತಿ ಹೊಂದಿರಬೇಕು.