ಬೆಂಗಳೂರು: ಬಿಎಂಟಿಸಿಗೆ 320 ಎಸಿ ಎಲೆಕ್ಟ್ರಿಕ್ ಬಸ್ ಗಳು ಸೇರ್ಪಡೆಯಾಗಲಿವೆ. ಡೀಸೆಲ್ ಬಸ್ ಗಳಿಂದ ಆಗುತ್ತಿರುವ ವೆಚ್ಚ ತಗ್ಗಿಸಲು ಮತ್ತು ಪರಿಸರ ಸಂರಕ್ಷಣೆ ಉದ್ದೇಶದಿಂದ ಹೊಸದಾಗಿ 320 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್ ಗಳ ಸೇರ್ಪಡೆಗೆ ಬಿಎಂಟಿಸಿ ಮುಂದಾಗಿದೆ.
ಕೇಂದ್ರ ಸರ್ಕಾರ ಸಾರ್ವಜನಿಕ ಸಾರಿಗೆಗಳಲ್ಲಿ ಎಲೆಕ್ಟ್ರಿಕ್ ಬಸ್ ಸೇರಿದಂತೆ ಇತರೆ ವಾಹನಗಳ ಸೇರ್ಪಡೆಗೆ ಒತ್ತು ನೀಡುತ್ತಿದ್ದು, ರಾಜ್ಯ ಸರ್ಕಾರಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿಯಲ್ಲಿ 390 ನಾನ್ ಎಸಿ ಎಲೆಕ್ಟ್ರಿಕ್ ಬಸ್ ಗಳಿದ್ದು, ಇವುಗಳೊಂದಿಗೆ 320 ಎಸಿ ಎಲೆಕ್ಟ್ರಿಕ್ ಬಸ್ ಗಳ ಸೇರ್ಪಡೆ ಮಾಡಲಾಗುವುದು.
ಈ ಎಸಿ ಎಲೆಕ್ಟ್ರಿಕ್ ಬಸ್ ಗಳನ್ನು ಖರೀದಿಸಬೇಕೆ ಅಥವಾ ಗುತ್ತಿಗೆ ಆಧಾರದಲ್ಲಿ ಪಡೆಯಬೇಕೆಂಬುದರ ಬಗ್ಗೆ ಚರ್ಚೆ ನಡೆದಿದ್ದು, ಶೀಘ್ರವೇ 320 ಬಸ್ ಗಳನ್ನು ಸೇರ್ಪಡೆ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.