
ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ನಲ್ಲಿ ಅಗ್ನಿ ಅವಘಡ ಉಂಟಾಗಿದೆ. ಬೊಮ್ಮನಹಳ್ಳಿ – ಹೊಸೂರು ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ.
ಏಕಾಏಕಿ ಬಿಎಂಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲ ಕೆಳಗಿಳಿದು ಓಡಿದ್ದಾರೆ. ಬಸ್ ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು, ಸಿಬ್ಬಂದಿ ಪಾರಾಗಿದ್ದಾರೆ. ಹೆದ್ದಾರಿಯಲ್ಲಿ ಕಿಲೋಮೀಟರ್ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.