alex Certify ಊರಿಗೆ ಹೊರಟವರು, ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಊರಿಗೆ ಹೊರಟವರು, ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಸೋಂಕು ತಡೆಗೆ ಜಾರಿ ಮಾಡಲಾಗಿದ್ದ ನಿರ್ಬಂಧ ಸೋಮವಾರದಿಂದ ಸಡಿಲಿಕೆಯಾಗಲಿದ್ದು ಬಸ್ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ.

ಕೊರೊನಾ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರದ ನಂತರ ಮತ್ತಷ್ಟು ಚಟುವಟಿಕೆಗಳಿಗೆ ಅವಕಾಶ ನೀಡಬಹುದು. ಇನ್ನು ಬಿಎಂಟಿಸಿ ಸಂಚಾರಕ್ಕೆ ಸಿದ್ಧತೆ ನಡೆಸಲಾಗಿದೆ. ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಮಾಡಲಿದ್ದು, ಕರ್ತವ್ಯಕ್ಕೆ ಹಾಜರಾಗುವ ಮೊದಲು ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಆಯಾ ಘಟಕಗಳಲ್ಲಿ ಸಿಬ್ಬಂದಿಗೆ ಪರೀಕ್ಷೆ ನಡೆಸಲಿದ್ದು, ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಸೋಮವಾರದಿಂದ ಬಹುತೇಕ ಚಟುವಟಿಕೆಗಳಿಗೆ ಅವಕಾಶ ನೀಡಲಿದ್ದು, ಶೇಕಡ 50 ರಷ್ಟು ಪ್ರಯಾಣಿಕರೊಂದಿಗೆ ಸಂಚಾರಕ್ಕೆ ಅವಕಾಶ ನೀಡಬಹುದು. ಬಿಎಂಟಿಸಿ, ಕೆಎಸ್ಆರ್ಟಿಸಿ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...