ಬೆಂಗಳೂರು: ಕೊರೋನಾ ಕಾರಣದಿಂದಾಗಿ ಸ್ಥಗಿತಗೊಳಿಸಲಾಗಿದ್ದ ರಾತ್ರಿ ಸಂಚಾರವನ್ನು ಬಿಎಂಟಿಸಿ ಪುನರಾರಂಭಿಸಿದೆ.
ಬಿಎಂಟಿಸಿ ವತಿಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕೊರೋನಾ ಸುರಕ್ಷತೆ ಕ್ರಮಗಳೊಂದಿಗೆ ಕೆಂಪೇಗೌಡ ಬಸ್ ನಿಲ್ದಾಣ, ಕೆಆರ್ ಮಾರುಕಟ್ಟೆ ಸೇರಿದಂತೆ ಪ್ರಮುಖ ಬಸ್ ನಿಲ್ದಾಣಗಳಿಂದ ವಿವಿಧ ಪ್ರದೇಶಗಳಿಗೆ 48 ಮಾರ್ಗಗಳಲ್ಲಿ ಹೋಗುತ್ತೆ 70 ಸಾರಿಗೆಗಳ ಕಾರ್ಯಾಚರಣೆಯನ್ನು ಸೋಮವಾರದಿಂದ ಪ್ರಾರಂಭಿಸಲಾಗಿದೆ.
ಕೊರೋನಾ ಕಾರಣದಿಂದಾಗಿ ಬಿಎಂಟಿಸಿ ರಾತ್ರಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು, ಪ್ರಯಾಣಿಕರಿಗೆ ಭಾರಿ ತೊಂದರೆಯಾಗುತ್ತಿತ್ತು. ಕೊರೊನಾ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ವ್ಯವಹಾರಗಳು ಸಹಜ ಸ್ಥಿತಿಗೆ ಮರಳಿದೆ. ಈ ಹಿನ್ನಲೆಯಲ್ಲಿ ಬಿಎಂಟಿಸಿ ರಾತ್ರಿ ಸಂಚಾರ ಆರಂಭಿಸಿದೆ.