
ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 17 ರಿಂದ ಕಾಲೇಜು ಆರಂಭ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ.
ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ತಾಂತ್ರಿಕ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಬಿಎಂಟಿಸಿಯಿಂದ ಅವಕಾಶ ಕಲ್ಪಿಸಲಾಗಿದೆ. ಕಳೆದ ವರ್ಷದ ಪಾಸ್, ಸ್ಮಾರ್ಟ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಮುಂದಿನ ಪಾಸ್ ಆದೇಶದವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ವಾಸಸ್ಥಳದಿಂದ ಕಾಲೇಜಿನವರೆಗೆ ಮಾತ್ರ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಬಿಎಂಟಿಸಿ ಅವಕಾಶ ಕಲ್ಪಿಸಿದೆ ಎಂದು ಹೇಳಲಾಗಿದೆ.