
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯಲ್ಲಿ ಖಾಲಿ ಇರುವ 2500 ನಿರ್ವಾಹಕರ ಹುದ್ದೆಗಳು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ 76 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅಧಿಸೂಚನೆ ಹೊರಡಿಸಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 19 ರಂದು ಆನ್ಲೈನ್ ಲಿಂಕ್ ಬಿಡುಗಡೆ ಮಾಡಲಾಗುತ್ತದೆ. ಮೇ 18 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ https://kea.kar.nic ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.