ಬೆಂಗಳೂರು: ಬಿಎಂಟಿಸಿ ದರ ಹೆಚ್ಚಳ ಅನಿವಾರ್ಯ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಸಿ. ಶಿಖಾ ಹೇಳಿದ್ದಾರೆ.
ದರ ಹೆಚ್ಚಳ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಬಜೆಟ್ನಲ್ಲಿ ನಿರ್ಧಾರ ಹೊರಬರುವ ಸಾಧ್ಯತೆಯಿದೆ. ಕೊರೋನಾ ಬಳಿಕ 10 ಲಕ್ಷ ಪ್ರಯಾಣಿಕರ ಸಂಖ್ಯೆ ಕುಸಿತವಾಗಿದೆ. ಬಿಎಂಟಿಸಿ ಸಂಸ್ಥೆ ಕೊರೋನಾ ಕಾರಣದಿಂದ ಆರ್ಥಿಕ ಸಂಕಷ್ಟದಲ್ಲಿದೆ ಎಂದು ತಿಳಿಸಿದ್ದಾರೆ.
ಡೀಸೆಲ್ ಬೆಲೆ ಕಳೆದ ವರ್ಷಕ್ಕಿಂತ 30 ರೂಪಾಯಿ ಹೆಚ್ಚಳವಾಗಿದೆ. ಹೀಗಾಗಿ ಬಿಎಂಟಿಸಿ ಟಿಕೆಟ್ ದರ ಹೆಚ್ಚಳ ಅನಿವಾರ್ಯ ಎಂದು ಹೇಳಲಾಗಿದೆ.