alex Certify ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಲಾಕ್ ಡೌನ್ ತೆರವಾಗ್ತಿದ್ದಂತೆ ಟಿಕೆಟ್ ದರ ಹೆಚ್ಚಳ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಲಾಕ್ ಡೌನ್ ತೆರವಾಗ್ತಿದ್ದಂತೆ ಟಿಕೆಟ್ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು: ಡೀಸೆಲ್ ಬೆಲೆ ಏರಿಕೆ, ನೌಕರರ ಮುಷ್ಕರ ಮತ್ತು ಲಾಕ್ಡೌನ್ ಮೊದಲಾದ ಕಾರಣಗಳಿಂದ ಆರ್ಥಿಕ ಸಂಕಷ್ಟದಲ್ಲಿರುವ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಕುರಿತಾಗಿ ಚರ್ಚೆ ನಡೆದಿದೆ.

6 ತಿಂಗಳ ಹಿಂದೆ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಗೆ ಮರುಜೀವ ನೀಡಲಾಗಿದ್ದು, ಲಾಕ್ ಡೌನ್ ತೆರವಾಗುತ್ತಿದ್ದಂತೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕೊರೋನಾ ಸಂಕಷ್ಟ, ಲಾಕ್ಡೌನ್, ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್ ದರ ಹೆಚ್ಚಳ, ಮೊದಲಾದ ಅಗತ್ಯ ವಸ್ತುಗಳ ದರ ಏರಿಕೆಯಿಂದ ಮೊದಲೇ ಸಂಕಷ್ಟದಲ್ಲಿರುವ ಜನರಿಗೆ ಪ್ರಯಾಣದರ ಹೆಚ್ಚಳದ ಬಿಸಿ ತಟ್ಟಲಿದೆ. ಬಿಎಂಟಿಸಿ ರೀತಿಯಲ್ಲಿ ಬೇರೆ ಸಾರಿಗೆ ಸಂಸ್ಥೆಗಳು ಕೂಡ ಡೀಸೆಲ್ ಬೆಲೆ ಭಾರೀ ಏರಿಕೆ ಕಾರಣದಿಂದ ಪ್ರಯಾಣ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ.

ಆದರೆ, ಪ್ರಯಾಣದರ ಏರಿಕೆ ಅನಿವಾರ್ಯವಾಗಿದ್ದರೂ, ಜನಸಾಮಾನ್ಯರಿಂದ ತೀವ್ರ ವಿರೋಧ ವ್ಯಕ್ತವಾಗುವ ಕಾರಣಕ್ಕೆ ತಕ್ಷಣವೇ ಟಿಕೆಟ್ ದರ ಹೆಚ್ಚಳ ಮಾಡದಿರಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...