
ಬೆಂಗಳೂರು: ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಯಿಂದ ವಿಕಲಚೇತನ ಯುವಕ ಸಾವನ್ನಪ್ಪಿದ ಘಟನೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ತಡರಾತ್ರಿ 12:15ಕ್ಕೆ ನಡೆದಿದೆ.
ವಿಶೇಷ ಚೇತನ ಯುವಕ ಬಸ್ ನಿಲ್ದಾಣದಲ್ಲಿ ನಡೆದುಕೊಂಡು ಹೋಗುವಾಗ ಅತಿ ವೇಗವಾಗಿ ಬಂದ ಬಿಎಂಟಿಸಿ ಬಸ್ ನಿಯಂತ್ರಣ ಸಿಗದೇ ಯುವಕನ ಮೇಲೆಯೇ ಹರಿದಿದೆ. ಬಸ್ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣವೆನ್ನಲಾಗಿದೆ.
ಮೆಜೆಸ್ಟಿಕ್ ನಿಲ್ದಾಣಕ್ಕೆ ವೇಗವಾಗಿ ಬಸ್ ಚಾಲನೆ ಮಾಡಿಕೊಂಡು ಬಂದ ಚಾಲಕ ನಡೆದುಕೊಂಡು ಹೋಗುತ್ತಿದ್ದ ಯುವಕನ ಮೇಲೆಯೇ ನುಗ್ಗಿಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಯುವಕ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಯುವಕನ ಮೇಲೆ ಬಸ್ ಹರಿದರೂ ಚಾಲಕ ಗಮನಿಸಿಲ್ಲ. ಸ್ಥಳದಲ್ಲಿದ್ದವರು ಕೂಗಾಡಿದಾಗ ಮುಂದೆ ಹೋಗಿ ಬಸ್ ನಿಲ್ಲಿಸಿ ಓಡಲು ಶುರು ಮಾಡಿದಾಗ ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ ಎನ್ನಲಾಗಿದೆ.