ಬೆಳಗಾವಿ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ 2024ರ ಮಾರ್ಚ ಅಂತ್ಯಕ್ಕೆ 921 ಎಲೆಕ್ಟ್ರಿಕ್ ಬಸ್ ನೀಡಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬಿಎಂಟಿಸಿ ಇದುವರೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಒಟ್ಟು 90 ಎಲೆಕ್ಟ್ರಿಕ್ ಬಸ್‌ಗಳನ್ನು ಜಿಸಿಸಿ ಆಧಾರದ ಮೇಲೆ ಪಡೆದುಕೊಂಡಿದೆ. ಬಿಎಂಸಿಟಿಸಿಯಿಂದ ಪ್ರಸ್ತುತ ಈಗ ಒಟ್ಟು 15 ಬಸ್ ಘಟಕ, ಬಸ್ ನಿಲ್ದಾಣಗಳಲ್ಲಿ ಚಾರ್ಜಿಂಗ್ ಸೌಲಭ್ಯಗಳನ್ನು ಸ್ಥಾಪಿಸಿ 390 ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದರು.
ರಾಜ್ಯ ಸರ್ಕಾರವು ಬಿಎಂಟಿಸಿಗೆ 150 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಿದೆ. ಮಾರ್ಚ್ ನಲ್ಲಿ 921 ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗಳು ರಸ್ತೆಗಿಳಿಯಲಿವೆ ಎಂದು ಹೇಳಿದರು.