alex Certify BMTCಗೆ ಶೀಘ್ರದಲ್ಲೇ 921 ಎಲೆಕ್ಟ್ರಿಕ್ ಬಸ್: ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BMTCಗೆ ಶೀಘ್ರದಲ್ಲೇ 921 ಎಲೆಕ್ಟ್ರಿಕ್ ಬಸ್: ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ


ಬೆಳಗಾವಿ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ 2024ರ ಮಾರ್ಚ ಅಂತ್ಯಕ್ಕೆ 921 ಎಲೆಕ್ಟ್ರಿಕ್ ಬಸ್ ನೀಡಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಬಿಎಂಟಿಸಿ ಇದುವರೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಒಟ್ಟು 90 ಎಲೆಕ್ಟ್ರಿಕ್ ಬಸ್‌ಗಳನ್ನು ಜಿಸಿಸಿ ಆಧಾರದ ಮೇಲೆ ಪಡೆದುಕೊಂಡಿದೆ. ಬಿಎಂಸಿಟಿಸಿಯಿಂದ ಪ್ರಸ್ತುತ ಈಗ ಒಟ್ಟು 15 ಬಸ್ ಘಟಕ, ಬಸ್ ನಿಲ್ದಾಣಗಳಲ್ಲಿ ಚಾರ್ಜಿಂಗ್ ಸೌಲಭ್ಯಗಳನ್ನು ಸ್ಥಾಪಿಸಿ 390 ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದರು.

ರಾಜ್ಯ ಸರ್ಕಾರವು ಬಿಎಂಟಿಸಿಗೆ 150 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಿದೆ. ಮಾರ್ಚ್ ನಲ್ಲಿ 921 ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗಳು ರಸ್ತೆಗಿಳಿಯಲಿವೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...