BMW ಕಾರಿನಲ್ಲಿ ಸಾಗಿಸುತ್ತಿದ್ದ 66 ಕೆಜಿ ಬೆಳ್ಳಿ ವಸ್ತು ವಶ; ಬೋನಿ ಕಪೂರ್ ಅವರಿಗೆ ಸೇರಿದ್ದು ಎಂದ ಚಾಲಕ…!

ಮೇ 10ರಂದು ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಅಕ್ರಮ ತಡೆಯಲು ಹಲವೆಡೆ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಹೀಗಾಗಿ ಕೋಟ್ಯಾಂತರ ರೂಪಾಯಿ ನಗದು, ಅಷ್ಟೇ ಮೊತ್ತದ ಬೆಲೆಬಾಳುವ ವಸ್ತುಗಳು ಪತ್ತೆಯಾಗುತ್ತಿವೆ.

ದಾವಣಗೆರೆ ತಾಲೂಕಿನ ಹೆಬ್ಬಾಳ್ ಸಮೀಪ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್ ನಲ್ಲಿ ಹೀಗೆ ತಪಾಸಣೆ ನಡೆಸುವ ಸಂದರ್ಭದಲ್ಲಿ ಬರೋಬ್ಬರಿ 39 ಲಕ್ಷ ರೂಪಾಯಿ ಮೌಲ್ಯದ 66 ಕೆಜಿ ಬೆಳ್ಳಿ ವಸ್ತುಗಳು ಪತ್ತೆಯಾಗಿವೆ.

ಚೆನ್ನೈನಿಂದ ಮುಂಬೈ ಕಡೆ ಹೊರಟಿದ್ದ ಐಷಾರಾಮಿ ಬಿಎಂಡಬ್ಲ್ಯೂ ಕಾರಿನಲ್ಲಿ 5 ಬಾಕ್ಸ್ ಗಳಲ್ಲಿ ಇಟ್ಟಿದ್ದ ಬೆಳ್ಳಿ ತಟ್ಟೆ, ಬಟ್ಟಲು, ಚಮಚ, ನೀರಿನ ಜಗ್ ಮೊದಲಾದವುಗಳು ಪತ್ತೆಯಾಗಿದ್ದು, ಇವುಗಳಿಗೆ ಸೂಕ್ತ ದಾಖಲೆಗಳು ಇರಲಿಲ್ಲ ಎಂದು ಹೇಳಲಾಗಿದೆ. ಕಾರಿನಲ್ಲಿದ್ದ ಚಾಲಕ ಸುಲ್ತಾನ್ ಖಾನ್ ಹಾಗೂ ಹರಿಸಿಂಗ್ ಎಂಬವರನ್ನು ವಿಚಾರಿಸಿದ ವೇಳೆ ಇವುಗಳು ಬಾಲಿವುಡ್ ನಿರ್ಮಾಪಕ ಬೋನಿ ಕಪೂರ್ ಅವರಿಗೆ ಸೇರಿದ್ದು ಎಂದು ಹೇಳಿದ್ದಾರೆನ್ನಲಾಗಿದ್ದು, ಸಾಮಗ್ರಿಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read