ಚಿಕ್ಕಬಳ್ಳಾಪುರ: ಬಿಜೆಪಿ ಕೋಮುವಾದಿ, ಮತೀಯವಾದಿ ಪಕ್ಷ ಎಂದು ಸ್ವಪಕ್ಷದ ವಿರುದ್ಧವೇ ಸಂಸದ ಬಿ.ಎನ್. ಬಚ್ಚೇಗೌಡ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು, ಮೈತ್ರಿಯಿಂದ ಬಿಜೆಪಿಗೆ ಒಳಿತಾಗಲ್ಲ ಎಂದು ಹೇಳಿದ್ದಾರೆ.
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರು ಇರುವವರೆಗೂ ಬಿಜೆಪಿ ಜೊತೆ ಜೆಡಿಎಸ್ ಹೋಗಲ್ಲ ಎಂದುಕೊಂಡಿದ್ದೆ. ಆದರೆ, ಜಾತ್ಯತೀತ ಎನಿಸಿರುವ ಜೆಡಿಎಸ್ ಪಕ್ಷ ಕೋಮುವಾದಿ ಬಿಜೆಪಿ ಜೊತೆ ಹೋಗುವುದು ಅಚ್ಚರಿ ತಂದಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕರ ನೇಮಕವಾಗಿಲ್ಲ. ಪಕ್ಷದ ವರಿಷ್ಠರು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕಾರಣದಿಂದಾಗಿ ವಿಳಂಬ ಮಾಡಿದ್ದಾರೆ. ಈ ಮೈತ್ರಿ ಆಧರಿಸಿ ರಾಜ್ಯಾಧ್ಯಕ್ಷರು ಮತ್ತು ವಿಪಕ್ಷ ನಾಯಕರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.