alex Certify ಕಾಂಗ್ರೆಸ್ ಶಾಸಕರು, ಮುಖಂಡರಿಗೆ ಹೈಕಮಾಂಡ್ ಶಾಕ್: ನಿಗಮ -ಮಂಡಳಿ ನೇಮಕಾತಿ ಮತ್ತೆ ವಿಳಂಬ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಶಾಸಕರು, ಮುಖಂಡರಿಗೆ ಹೈಕಮಾಂಡ್ ಶಾಕ್: ನಿಗಮ -ಮಂಡಳಿ ನೇಮಕಾತಿ ಮತ್ತೆ ವಿಳಂಬ

ಬೆಂಗಳೂರು: ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ದೀಪಾವಳಿಗೆ ಮೊದಲೇ ಕಾಂಗ್ರೆಸ್ ಪಕ್ಷದ 20ಕ್ಕೂ ಅಧಿಕ ಶಾಸಕರು ಮೊದಲ ಹಂತದಲ್ಲಿ ಹಾಗೂ ಮುಖಂಡರಿಗೆ ಎರಡನೇ ಹಂತದಲ್ಲಿ ನಿಗಮ -ಮಂಡಳಿಗಳಿಗೆ ನೇಮಕಾತಿ ನಡೆಯಬೇಕಿತ್ತು.

ಆದರೆ, ನಿಗಮ -ಮಂಡಳಿ ನೇಮಕಾತಿ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮುಗಿದ ನಂತರವೇ ನಿಗಮ -ಮಂಡಳಿಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ ಸಿಗಲಿದೆ ಎಂದು ಹೇಳಲಾಗಿದೆ.

ರಾಜ್ಯ ಕಾಂಗ್ರೆಸ್ ಸುಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು, ನಿಗಮ ಮಂಡಳಿ ನೇಮಕಾತಿ ಕುರಿತಾಗಿ ಇನ್ನೂ ನಾಲ್ಕೈದು ಸುತ್ತಿನ ಚರ್ಚೆ ನಡೆಸಬೇಕಿದ್ದು, ನನಗೆ ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಜವಾಬ್ದಾರಿ ನೀಡಿರುವುದರಿಂದ ಈ ತಿಂಗಳು 17ರಂದು ಮತ್ತೆ ರಾಜ್ಯಕ್ಕೆ ಆಗಮಿಸಿ ನಿಗಮ -ಮಂಡಳಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.

ನಿಗಮ -ಮಂಡಳಿ ನಾಮನಿರ್ದೇಶನ ಮೂಲಕ ಪಕ್ಷದ ಶಾಸಕರು, ಕಾರ್ಯಕರ್ತರಿಗೆ ಸ್ಥಾನಮಾನ ನೀಡಲು ರಾಜ್ಯ ಕಾಂಗ್ರೆಸ್ ನಾಯಕರು ಮುಂದಾಗಿದ್ದು, 20ಕ್ಕೂ ಅಧಿಕ ಶಾಸಕರು ಪಟ್ಟಿ ಸಿದ್ಧಪಡಿಸಲಾಗಿದೆ. ಮುಖಂಡರು, ಕಾರ್ಯಕರ್ತರಿಗೂ ಅವಕಾಶ ನೀಡಲು ಕ್ರಮ ಕೈಗೊಳ್ಳಲಾಗಿದೆ. ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಬಳಿಕ ನಿಗಮ -ಮಂಡಳಿ ನೇಮಕಾತಿಗೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...