ಬೆಂಗಳೂರು: 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಲಿದೆ.
ನ್ಯಾ. ಕೆ. ಸೋಮಶೇಖರ್, ನ್ಯಾ. ಕೆ. ರಾಜೇಶ್ ರೈ ಅವರು ಇರುವ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಲಿದೆ. ಸರ್ಕಾರದ ಮೇಲ್ಮನವಿ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು.
ಹೈಕೋರ್ಟ್ ಏಕಸದಸ್ಯ ಪೀಠ ಶಾಲೆಗಳ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು. ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ನಡೆ ನೀಡಿತ್ತು. ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ನಿಂದ ತಡೆಯಾಜ್ಞೆ ನೀಡಲಾಗಿತ್ತು. ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ವಾದ ಪ್ರತಿವಾದ ಆಲಿಸಿದ ವಿಭಾಗೀಯ ಪೀಠ ತೀರ್ಪು ಕಾಯ್ದಿರಿಸಿತ್ತು. ಇಂದು ಬೆಳಗ್ಗೆ 10.30 ಕ್ಕೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ.