ಬೆಂಗಳೂರು: 2024 -25 ನೇ ಶೈಕ್ಷಣಿಕ ಸಾಲಿನಲ್ಲಿಯೂ 5, 8 ಮತ್ತು 9ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಸೆಪ್ಟೆಂಬರ್ ನಲ್ಲಿ ಮೌಲ್ಯಾಂಕನ ಪರೀಕ್ಷೆ -1 ಮಾರ್ಚ್ ನಲ್ಲಿ ಮೌಲ್ಯಾಂಕನ -2 ಪರೀಕ್ಷೆಗಳನ್ನು ನಡೆಸಿ ಏಪ್ರಿಲ್ ನಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ. 2023- 24 ರಲ್ಲಿ 5, 8, 9ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸುವ ವಿಚಾರ ಕಾನೂನು ಬಿಕ್ಕಟ್ಟಿಗೆ ಸಿಲುಕಿತ್ತು.
ಫಲಿತಾಂಶ ಪ್ರಕಟಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಪ್ರಕರಣ ಕೋರ್ಟ್ ನಲ್ಲಿದ್ದರೂ ಮುಂದಿನ ಶೈಕ್ಷಣಿಕ ವರ್ಷದಲ್ಲಿಯೂ ಮೌಲ್ಯಾಂಕನ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ.