alex Certify 5, 8, 9ನೇ ತರಗತಿಗೆ ಈ ವರ್ಷವೂ ಬೋರ್ಡ್ ಪರೀಕ್ಷೆ ಇಲ್ಲ: ‘ಮೌಲ್ಯಾಂಕನ’ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

5, 8, 9ನೇ ತರಗತಿಗೆ ಈ ವರ್ಷವೂ ಬೋರ್ಡ್ ಪರೀಕ್ಷೆ ಇಲ್ಲ: ‘ಮೌಲ್ಯಾಂಕನ’ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ

ಬೆಂಗಳೂರು: 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ 2024 -25 ನೇ ಸಾಲಿನಲ್ಲಿಯೂ ಬೋರ್ಡ್ ಪರೀಕ್ಷೆ ನಡೆಸದಿರಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ, ಈ ಹಿಂದೆ ಇದ್ದಂತೆಯೇ ಮೌಲ್ಯಾಂಕನ ಪರೀಕ್ಷೆಯನ್ನೇ ಮುಂದುವರೆಸಲು ಶಿಕ್ಷಣ ಇಲಾಖೆ ತೀರ್ಮಾನ ಕೈಗೊಂಡಿದೆ,

ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು 2024- 25 ನೇ ಶೈಕ್ಷಣಿಕ ಸಾಲಿನಿಂದ ಒಂದರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಭಾಗ -1 ಮತ್ತು ಭಾಗ -2ರ ಆಧಾರದಲ್ಲಿ ಮೌಲ್ಯಂಕನ ಪೂರ್ಣಗೊಳಿಸಲು ಎಲ್ಲಾ ಶಾಲೆಗಳಿಗೆ ಸುತ್ತೋಲೆ ಕಳುಹಿಸಲಾಗುವುದು.

ಬೋರ್ಡ್ ಪರೀಕ್ಷೆ ಕುರಿತಾಗಿ ವಿಚಾರಣೆ ಮುಂದುವರೆಸಿದ್ದ ಸುಪ್ರೀಂಕೋರ್ಟ್ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ 5, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಅನುಮತಿ ಇಲ್ಲವೆಂದು ಹೇಳಿದ್ದು, ಹೀಗಾಗಿ ಮೌಲ್ಯಂಕನವನ್ನೇ ಮುಂದುವರಿಸಲು ಶಾಲೆಗಳಿಗೆ ಸುತ್ತೋಲೆ ಕಳುಹಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...