ಬೆಂಗಳೂರು: ಮಾರ್ಚ್ 27 ರಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಉದ್ದೇಶಿಸಿದ್ದು, ಇದನ್ನು ಮುಂದೂಡವಂತೆ ಕೋರಿ ಶಾಲೆಗಳು ಹೈಕೋರ್ಟ್ ಮೊರೆ ಹೋಗಿದ್ದು, ಈ ಕುರಿತು ಸರ್ಕಾರಕ್ಕೆ ನಿರ್ದೇಶನ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಇರುವುದರಿಂದ ಮತ್ತೆ ಪ್ರವೇಶಿಸುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗಿಯ ಪೀಠದಲ್ಲಿ ಅನುದಾನ ರಹಿತ ಖಾಸಗಿ ಶಾಲೆಗಳ ಪರ ವಕೀಲ ಎ. ವೇಲನ್ ಹಾಜರಾಗಿ ಮಾರ್ಚ್ 27ರಿಂದ ಆರಂಭವಾಗುವ 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ಮುಂದೂಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿದ್ದಾರೆ.
ಮನವಿಯನ್ನು ನ್ಯಾಯಪೀಠ ತಳ್ಳಿ ಹಾಕಿದ್ದು, ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಬಾಕಿ ಇರುವಾಗ ಇಲ್ಲಿ ಪ್ರಸ್ತಾಪಿಸುವುದು ಸರಿಯಲ್ಲ. ಇದು ಉತ್ತಮ ಬೆಳವಣಿಗೆಯಲ್ಲ. ಸುಪ್ರೀಂಕೋರ್ಟ್ ನಲ್ಲಿಯೇ ನಿಮ್ಮ ವಾದ ಮಂಡಿಸಿ. ಹೈಕೋರ್ಟ್ ಯಾವುದೇ ರೀತಿಯಲ್ಲಿಯೂ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಪಿ.ಬಿ. ವರಾಳೆ ಹೇಳಿದ್ದಾರೆ.