ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಿಂದ ನಿಗಮ, ಮಂಡಳಿಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಕೂಡಲೇ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ.
ನಿಗಮ ಮಂಡಳಿ ನೇಮಕಾತಿಯಲ್ಲಿ ಶಾಸಕರಿಗೆ ಶೇಕಡ 30ರಷ್ಟು, ಪಕ್ಷದ ಕಾರ್ಯಕರ್ತರಿಗೆ ಶೇಕಡ 70ರಷ್ಟು ಮೀಸಲಿಡಲು ತೀರ್ಮಾನಿಸಲಾಗಿದೆ. 8-10 ದಿನಗಳ ಒಳಗೆ ನಿಗಮ, ಮಂಡಳಿಗಳ ನೇಮಕಾತಿ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 150 ದಿನ ಸಮೀಪಿಸುತ್ತಿದ್ದು, ಶಾಸಕರು, ಮುಖಂಡರಿಗೆ ನಿಗಮ- ಮಂಡಳಿಯಲ್ಲಿ ಅವಕಾಶ ಮಾಡಿಕೊಡುವಂತೆ ಹೈಕಮಾಂಡ್ ತಿಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮೊದಲಾದ ನಾಯಕರು ಚರ್ಚೆ ನಡೆಸಿ ನಿಗಮ ಮಂಡಳಿಗೆ ನೇಮಕಾತಿಗೆ ತೀರ್ಮಾನಿಸಲಾಗಿದೆ.