alex Certify ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ರಾಜ್ಯ ಸರ್ಕಾರದ ವಿವಿಧ ನಿಗಮಗಳಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ರಾಜ್ಯ ಸರ್ಕಾರದ ವಿವಿಧ ನಿಗಮಗಳಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯದ ವಿವಿಧ ನಿಗಮ, ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 31 ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಸ್ತರಣೆ ಮಾಡಿದೆ.

ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಆಹಾರ ಮತ್ತು ನಾಗರೀಕ ಸರಬರಾಜು ನಿಗಮ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಗಳಲ್ಲಿ ಖಾಲಿ ಇರುವ ಮಿಕ್ಕುಳಿದ, ವೃಂದ, ಕಲ್ಯಾಣ ಕರ್ನಾಟಕ ಪ್ರದೇಶ ಸ್ಥಳೀಯ ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಮೊದಲು ಜು. 22 ಅರ್ಜಿ ಸಲ್ಲಿಕೆಗೆ ಕೊನೆಯ ದಿನವೆಂದು ನಿಗದಿ ಮಾಡಲಾಗಿತ್ತು. ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಜುಲೈ 31ರ ಸಂಜೆ 5.30ರವರೆಗೆ ಅರ್ಜಿ ಸಲ್ಲಿಸಲು ಅವಧಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಸ್ತರಿಸಿದೆ. ಶುಲ್ಕ ಪಾವತಿಗೆ ಆಗಸ್ಟ್ 3ರ ಮಧ್ಯಾಹ್ನ 3:30ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...