ಮೈಸೂರು: ನಿಶ್ಚಿತಾರ್ಥವಾಗಿದ್ದ ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಹಿರೇಹಳ್ಳಿಯಲ್ಲಿ ಘಟನೆ ನಡೆದಿದೆ.
ಗ್ರಾಮದ ಪುಟ್ಟಸ್ವಾಮಪ್ಪನವರ ಪುತ್ರಿ ಕವಿತಾ(20) ಶವವಾಗಿ ಪತ್ತೆಯಾಗಿದ್ದಾರೆ. ಯುವತಿಯೊಂದಿಗೆ ನಿಶ್ಚಿತಾರ್ಥವಾಗಿದ್ದ ಜಗ ಎಂಬಾತನಿಂದಲೇ ಕೊಲೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಮೂರು ತಿಂಗಳ ಹಿಂದೆ ನಿಶ್ಚಿತಾರ್ಥದ ನಂತರ ಯುವತಿ ಮನೆಯಲ್ಲೇ ಜಗ ಹೆಚ್ಚು ಕಾಲ ಇರುತ್ತಿದ್ದ.
ಯುವತಿ ಪೋಷಕರು ಕೆಲಸಕ್ಕೆ ಹೋಗಿದ್ದಾಗ ಇಬ್ಬರು ಜಗಳವಾಡಿದ್ದರು ಎನ್ನಲಾಗಿದೆ. ಸದ್ಯ ಪರಾರಿಯಾಗಿರುವ ಜಗನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಹೆಚ್.ಡಿ. ಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.