alex Certify ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಶವ ದೇಗುಲದ ಬಾವಿಯಲ್ಲಿ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಶವ ದೇಗುಲದ ಬಾವಿಯಲ್ಲಿ ಪತ್ತೆ

ಕಲಬುರಗಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ದೇವಸ್ಥಾನದ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.

20 ವರ್ಷದ ಮಹಾಲಕ್ಷ್ಮಿ ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಡಿಸೆಂಬರ್ 18ರಂದು ಅವರು ಮನೆಯಿಂದ ಹೊರ ಹೋದವರು ನಾಪತ್ತೆಯಾಗಿದ್ದರು. ಮೃತದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿದ್ದು, ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಮಾಣಿಕೇಶ್ವರಿ ಕಾಲೋನಿಯ ಈಶ್ವರ ಉದ್ಯಾನವನದ ದೇವಸ್ಥಾನದಲ್ಲಿ ಯುವತಿ ಪ್ರತಿದಿನ ಬೆಳಗ್ಗೆ ಸ್ವಚ್ಛಗೊಳಿಸಿ ರಂಗೋಲಿ ಹಾಕಿ ಸೇವೆ ಮಾಡುತ್ತಿದ್ದರು. ಅದೇ ದೇವಸ್ಥಾನದ ಬಾವಿಯಲ್ಲಿ ಶವ ಪತ್ತೆಯಾಗಿದೆ. ಯುವತಿಯ ಸಾವಿಗೆ ಪೊಲೀಸರ ನಿರ್ಲಕ್ಷವೇ ಕಾರಣವೆಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಆಯುಕ್ತ ಆರ್. ಚೇತನ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರ್.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...