alex Certify BREAKING NEWS: ಬಾಯ್ಲರ್ ಸ್ಪೋಟ ಪ್ರಕರಣದಲ್ಲಿ ಮತ್ತಿಬ್ಬರು ಸಾವು, ಮೃತರ ಸಂಖ್ಯೆ 4 ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಾಯ್ಲರ್ ಸ್ಪೋಟ ಪ್ರಕರಣದಲ್ಲಿ ಮತ್ತಿಬ್ಬರು ಸಾವು, ಮೃತರ ಸಂಖ್ಯೆ 4 ಕ್ಕೆ ಏರಿಕೆ

ಬೆಂಗಳೂರು: ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಮೃತಪಟ್ಟಿದ್ದಾರೆ.

ಗಾಯಾಳುಗಳಾದ ಧನಲಕ್ಷ್ಮಿ(50) ಮತ್ತು ಸಚಿನ್(40) ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯ ಗೋಪಾಲಪುರದ ಐದನೇ ಅಡ್ಡರಸ್ತೆಯಲ್ಲಿ ಖಾದ್ಯ ತಯಾರಿಕೆ ಘಟಕದಲ್ಲಿ ಬಾಯ್ಲರ್ ಸ್ಫೋಟಗೊಂಡು ಇಬ್ಬರು ಸಜೀವ ದಹನವಾಗಿದ್ದರು.

ಬಿಹಾರ ಮೂಲದ ಮನೀಶ್ ಕುಮಾರ್ ಮತ್ತು ಸೌರವ್ ಅವಘಡ ನಡೆದ ಸಂದರ್ಭದಲ್ಲಿ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಲೀಕ ಸಚಿನ್ ಹಾಗೂ ಧನಲಕ್ಷ್ಮಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...