ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ರೈಸ್ ಮಿಲ್ ನಲ್ಲಿ ಬಾಯ್ಲರ್ ಸ್ಪೋಟಗೊಂಡಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಭದ್ರಾವತಿಯ ಚನ್ನಗಿರಿ ರಸ್ತೆಯ ರೈಸ್ ಮಿಲ್ ನಲ್ಲಿ ಗುರುವಾರ ಸಂಜೆ ಘಟನೆ ನಡೆದಿಎ. 20ಕ್ಕೂ ಅಧಿಕ ಮಂದಿ ರೈಸ್ ಮಿಲ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅಕ್ಕಿ ಲೋಡ್ ಮಾಡುತ್ತಿದ್ದ ವೇಳೆ ಏಕಾಏಕಿ ಬಾಯ್ಲರ್ ಸ್ಪೋಟಗೊಂಡಿದೆ ಎನ್ನಲಾಗಿದೆ.
ಸ್ಪೋಟದ ತೀವ್ರತೆಗೆ ರೈಸ್ ಮಿಲ್ ಕಟ್ಟಡ ಕುಸಿದು ಬಿದ್ದಿದೆ. ಕಬ್ಬಿಣದ ಆ್ಯಂಗ್ಲರ್, ಬಾರ್, ರಾಡ್, ಶೀಟ್ ಗಳು ಹಾರಿಹೋಗಿವೆ. ಘಟನೆಯಲ್ಲಿ ಗಾಯಗೊಂಡ 7 ಮಂದಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಸ್ಪೋಟಗೊಂಡ ಬಾಯ್ಲರ್ ಚೂರುಗಳು ಬಹು ದೂರದವರೆಗೂ ಹೋಗಿ ಬಿದ್ದಿವೆ. ಹಲವು ಮನೆಗಳಿಗೂ ಹಾನಿಯಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.